ADVERTISEMENT

ಮಧ್ಯಪ್ರದೇಶ: ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಹರಿದ ಟ್ರಕ್; 6 ಮಂದಿ ಸಾವು

ಪಿಟಿಐ
Published 5 ಡಿಸೆಂಬರ್ 2022, 2:04 IST
Last Updated 5 ಡಿಸೆಂಬರ್ 2022, 2:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್‌ನ ನಿಯಂತ್ರಣವನ್ನುಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ADVERTISEMENT

ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ.

ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.