ADVERTISEMENT

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ ಸ್ವಾಮಿ

ಪಿಟಿಐ
Published 19 ಫೆಬ್ರುವರಿ 2021, 21:58 IST
Last Updated 19 ಫೆಬ್ರುವರಿ 2021, 21:58 IST
   

ನವದೆಹಲಿ:ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್‌ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ ಶುಕ್ರವಾರ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹಾಗೂ ಇತರರ ವಿರುದ್ಧದ ಪ್ರಕರಣದಲ್ಲಿ ಕಾನೂನು ಕ್ರಮ ಜರುಗಿಸಲು ಸಾಕ್ಷ್ಯಗಳ ವಿಚಾರಣೆ ಆರಂಭಿಸಬೇಕು ಎಂಬ ಸ್ವಾಮಿ ಅವರು ಮಾಡಿದ ಮನವಿಯನ್ನು ವಿಚಾರಣಾ ನ್ಯಾಯಾಲಯವುತಿರಸ್ಕರಿಸಿತ್ತು.

ಸ್ವಾಮಿ ಅವರ ಅರ್ಜಿಯು ಅಪರಾಧ ದಂಡಸಂಹಿತೆಯ ಸೆಕ್ಷನ್‌ 244ರ ಅಡಿ ಹೇಳಿದಂತೆ, ಈ ಪ್ರಕರಣದಲ್ಲಿ ಎಲ್ಲಾ ವಿವರವಾದ ಪರಿಶೀಲನೆಗಳು ಮುಗಿದ ಬಳಿಕ ಸಾಕ್ಷ್ಯಗಳನ್ನು ಪರಿಗಣಿಸಲಾಗುವುದು ಎಂದು ಫೆಬ್ರುವರಿ 11ರಂದು ವಿಚಾರಣಾ ನ್ಯಾಯಾಲಯವು ಹೇಳಿತ್ತು. ಈ ಆದೇಶದಿಂದಅಸಮಾಧಾನಗೊಂಡಿರುವ ಸ್ವಾಮಿ, ದೆಹಲಿ ಹೈಕೋರ್ಟ್‌ನಲ್ಲಿ ಅದನ್ನುಪ್ರಶ್ನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.