ADVERTISEMENT

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ತೃತೀಯ ಲಿಂಗಿ ಬಂಧನ, ಬಿಡುಗಡೆ

ಪಿಟಿಐ
Published 13 ಜೂನ್ 2021, 8:31 IST
Last Updated 13 ಜೂನ್ 2021, 8:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭೋಪಾಲ್: ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದಡಿತೃತೀಯ ಲಿಂಗಿಯೊಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.

‘ನಾನು ವಿಶ್ವಾಸ್‌ ಕಿನ್ನರ್‌ ಎಂಬವರನ್ನು ಶನಿವಾರ ಸಂಜೆ ಬಂಧಿಸಲಾಗಿದ್ದು, ಅವರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಇನ್‌ಸ್ಪೆಕ್ಟರ್ ಡಿ.ಪಿ ಸಿಂಗ್‌ ಅವರು ವರದಿಗಾರರಿಗೆ ತಿಳಿಸಿದರು.

‘ಮಸೀದಿಯ ಆವರಣದಲ್ಲಿನಾನು ವಿಶ್ವಾಸ್‌ ಕಿನ್ನರ್‌ ಅವರು ನೃತ್ಯ ಮಾಡಿದ್ದು, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದು ವೈರಲ್‌ ಆಗಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ’ ಎಂದು ಮೋತಿ ಮಸೀದಿಯು ದೂರು ದಾಖಲಿಸಿದೆ.

ADVERTISEMENT

‘ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ ನಾನು ವಿಶ್ವಾಸ ಅವರಿಗೆ ಜಾಮೀನು ಸಿಕ್ಕಿದೆ’ ಎಂದು ಪೊಲೀಸರು ತಿಳಿಸಿದರು.

ನಾನು ವಿಶ್ವಾಸ್‌ ಕಿನ್ನಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.