ADVERTISEMENT

ಮಧ್ಯಪ್ರದೇಶ: ಆಂಬುಲೆನ್ಸ್‌ನಲ್ಲಿ ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಪಿಟಿಐ
Published 18 ಫೆಬ್ರುವರಿ 2023, 11:13 IST
Last Updated 18 ಫೆಬ್ರುವರಿ 2023, 11:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರೈಸನ್ (ಮಧ್ಯಪ್ರದೇಶ): ಗರ್ಭಿಣಿ ಮಹಿಳೆಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್‌ನಲ್ಲಿಯೇ ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಗರ್ಭಿಣಿಯನ್ನು ಪಿಪ್ಲಿಯಾ ಗೋಲಿ ಗ್ರಾಮದ ಜ್ಯೋತಿ ಬಾಯಿ(24) ಎಂದು ಗುರುತಿಸಲಾಗಿದೆ. ಆಕೆಗೆ ಶುಕ್ರವಾರ ಸಂಜೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಗೋಹರ್‌ಗಂಜ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಭೋಪಾಲ್‌ನ ಸುಲ್ತಾನಿಯಾ ಸರ್ಕಾರಿ ಆಸ್ಪತ್ರೆಗೆ ಆಂಬುಲೆನ್ಸ್‌ ಮೂಲಕ ತೆರಳಲು ಅಲ್ಲಿನ ಸಿಬ್ಬಂದಿ ಸಲಹೆ ನೀಡಿದ್ದರು. ಈ ವೇಳೆ ಆಂಬುಲೆನ್ಸ್‌ನಲ್ಲಿ ಮಹಿಳೆಯೊಂದಿಗೆ ಡಾ. ಸಂದೀಪ್ ಮಾರನ್ ತೆರಳಿದ್ದರು. ಆಕೆಗೆ ಮಾರ್ಗ ಮಧ್ಯೆದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ತ್ರಿವಳಿ ನವಜಾತ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ADVERTISEMENT

ತಾಯಿ ಹಾಗೂ ಮಕ್ಕಳನ್ನು ಸುಲ್ತಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಮಾರನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.