ADVERTISEMENT

ಎಂಎಸ್‌ಪಿ ಅಡಿ ಐದು ಧಾನ್ಯಗಳ ಖರೀದಿ: ಕೇಂದ್ರ ಕೃಷಿ ಸಚಿವಾಲಯ ಅನುಮತಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 15:49 IST
Last Updated 20 ಸೆಪ್ಟೆಂಬರ್ 2025, 15:49 IST
ಆಹಾರ ಧಾನ್ಯಗಳು
ಆಹಾರ ಧಾನ್ಯಗಳು   

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಐದು ಧಾನ್ಯಗಳ ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ.

2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

38,000 ಟನ್‌ ಹೆಸರು ಕಾಳು, 60,810 ಟನ್‌ ಉದ್ದು, 15,650 ಟನ್‌ ಸೂರ್ಯಕಾಂತಿ, 61,148 ಟನ್‌ ಕಡಲೆಬೀಜ ಮತ್ತು 1,15,000 ಟನ್‌ ಸೋಯಾಬಿನ್ ಖರೀದಿಗೆ ಅನುಮತಿ ಸಿಕ್ಕಿದೆ. 

ADVERTISEMENT

ಪ್ರಸಕ್ತ ಮುಂಗಾರಿನಲ್ಲಿ ರಾಜ್ಯದ ಕೃಷಿಕರು ಅತಿವೃಷ್ಟಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್‌ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಖರೀದಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್‌ ಚೌಹಾಣ್‌ ಅವರಿಗೆ ಪತ್ರ ಬರೆದಿದ್ದರು.

ಕರ್ನಾಟಕದ ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ಯೋಜನೆಯ ನೆರವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಒದಗಿಸಬೇಕು. ಈ ಕೂಡಲೇ ರಾಜ್ಯದಾದ್ಯಂತ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳ ಖರೀದಿಗೆ ಚಾಲನೆ ನೀಡಬೇಕೆಂದು ಜೋಶಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.