ADVERTISEMENT

ಕಾಶ್ಮೀರ: ‘ಪಿಡಿಪಿ ಕೋರ್ಟ್‌ಗೆ ಹೋಗುವುದಿಲ್ಲ’

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2018, 20:19 IST
Last Updated 26 ನವೆಂಬರ್ 2018, 20:19 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನುಅವಧಿಗೂ ಮುನ್ನವೇ ವಿಸರ್ಜಿಸಿದ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಆದೇಶದ ವಿರುದ್ಧ ಕೋರ್ಟ್ ಬದಲು ಜನತಾ ನ್ಯಾಯಾಲಯದ ಮೊರೆ ಹೋಗಲು ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನಿರ್ಧರಿಸಿದ್ದಾರೆ.

ಶಾಸಕರ ಖರೀದಿ ಮತ್ತು ಭಿನ್ನ ರಾಜಕೀಯ ಸಿದ್ಧಾಂತ ಹೊಂದಿರುವ ರಾಜಕೀಯ ಪಕ್ಷಗಳಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ರಾಜ್ಯಪಾಲರು ನೀಡಿದ ಕಾರಣವನ್ನು ಟ್ವೀಟ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT