ಪ್ರವೀಣ್ ತೊಗಾಡಿಯಾ
ಬದೌನ್ (ಉತ್ತರ ಪ್ರದೇಶ): ಮೊಘಲರ ಕಾಲದಲ್ಲಿ ದೇವಾಲಯಗಳನ್ನು ಕೆಡವಿ ಎಲ್ಲಾ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂದು ಬಜರಂಗದಳದ ರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಬಿಲ್ಸಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೊಗಾಡಿಯಾ, ‘ಮೊಘಲರ ಕಾಲದಲ್ಲಿ ನಿರ್ಮಿಸಲಾದ ಎಲ್ಲಾ ಮಸೀದಿಗಳು ದೇವಾಲಯಗಳನ್ನು ಕೆಡವಿ ನಿರ್ಮಿಸಿದವು. ಮಸೀದಿಗಳನ್ನು ನಿರ್ಮಿಸಲು ಕೆಡವಲಾದ 12,000 ದೇವಾಲಗಳ ಪಟ್ಟಿಯನ್ನು ನಾನು ನೋಡಿದ್ದೇನೆ’ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ತೊಗಾಡಿಯಾ ಕಳವಳ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧದ ಹೋರಾಟವಾಗಿದ್ದರೆ ಹಿಂದೂಗಳನ್ನು ಏಕೆ ಕೊಲ್ಲುತ್ತಿದ್ದರು. ಹಿಂದೂಗಳನ್ನು ರಕ್ಷಿಸುವ ಮತ್ತು ಸೂಕ್ತ ಉತ್ತರ ಕೊಡುವ ಸರ್ಕಾರ ಬೇಕಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.