ನವದೆಹಲಿ: ಮೊಹರಂ ಅಂಗವಾಗಿ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೋಮವಾರ ಮೆರವಣಿಗೆ ನಡೆದವು. ಬಿಹಾರದ ನವಾದಾದಲ್ಲಿ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿದ ಆರೋಪದಲ್ಲಿ ಪೊಲೀಸರು ಮೂವರನ್ನು ಬಂಧಿಸಿದರು.
‘ಮೊಹರಂ ಅಂಗವಾಗಿ ಮೆರವಣಿಗೆ ನಡೆಸಲು ಅನುಮತಿ ಪಡೆದಿರಲಿಲ್ಲ. ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿರುವುದು ಗಮನಕ್ಕೆ ಬಂದ ಕೂಡಲೇ ತನಿಖೆ ಆರಂಭಿಸಲಾಯಿತು. ಸ್ಥಳೀಯ ಪೊಲೀಸರು ನಡೆಸಿದ ತನಿಖೆಯ ಆಧಾರದಲ್ಲಿ ಮೂವರನ್ನು ಬಂಧಿಸಲಾಗಿದೆ’ ಎಂದು ಬಿಹಾರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ಜುಲೈ 13ರಂದು ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ಉತ್ತರ ಪ್ರದೇಶದ ಅಮೇಠಿಯಲ್ಲಿ ಮೆರವಣಿಗೆ ವೇಳೆ ಕೆಲವರು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.