ಮುಂಬೈ: ‘ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಸಿದರು.
‘ಸಂತೋಷ್ ಶೆಹರ್ ಮತ್ತು ಆನಂದ್ ಜಾದವ್ ಎಂಬವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಇಬ್ಬರು ಆರೋಪಿಗಳನ್ನು ಜೂನ್ 11 ರಂದು ಉಪನಗರ ಮಲಾಡ್‌ನಲ್ಲಿ ಬಂಧಿಸಲಾಯಿತು. ಸದ್ಯ ವಿಶೇಷ ನ್ಯಾಯಾಲಯವು ಆರೋಪಿಗಳನ್ನು ಜೂನ್ 21ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ’ ಎಂದು ಅವರು ಮಾಹಿತಿ ನೀಡಿದರು.
‘ಮನ್‍ಸುಖ್ ಹಿರೇನ್ ಸಾವಿನ ಪ್ರಕರಣದಲ್ಲೂ ಇವರು ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು.
ಫೆಬ್ರುವರಿ 25ರಂದು ಅಂಬಾನಿ ಮನೆ ಮುಂದೆ ಸ್ಪೋಟಕಗಳಿದ್ದ ವಾಹನ ಪತ್ತೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.