ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶುಕ್ರವಾರವೂ ವೆಂಟಿಲೇಟರ್ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಇಲ್ಲಿನ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಮಿದುಳಿನ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಶುಕ್ರವಾರವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ’ ಎಂದು ವೈದ್ಯರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.