ADVERTISEMENT

ಮುಲಾಯಂ ಸಿಂಗ್‌ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಪಿಟಿಐ
Published 7 ಅಕ್ಟೋಬರ್ 2022, 11:31 IST
Last Updated 7 ಅಕ್ಟೋಬರ್ 2022, 11:31 IST
ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್ ಯಾದವ್
ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್ ಯಾದವ್   

ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯ ಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್‌ ಯಾದವ್‌ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ.

ಮುಲಾಯಂ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮೇದಾಂತ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

82 ವರ್ಷದ ಮುಲಾಯಂ ಸಿಂಗ್ ಅವರು ಆಗಸ್ಟ್‌ 22ರಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಲೈ ತಿಂಗಳಲ್ಲಿಯೂ ಅವರು ಕೆಲದಿನ ಆಸ್ಪತ್ರೆಗೆ ದಾಖಲಾಗಿದ್ದರು.

ADVERTISEMENT

ಪುತ್ರ ಅಖಿಲೇಶ್‌ ಯಾದವ್, ಸೊಸೆ ಡಿಂಪಲ್‌ ಯಾದವ್, ಸಹೋದರ ಶಿವಪಾಲ್ ಸಿಂಗ್ ಸೇರಿದಂತೆ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.