ADVERTISEMENT

ಮುಂಬೈ ವಿಮಾನ ನಿಲ್ದಾಣ ಸ್ಫೋಟ ಬೆದರಿಕೆ: ಒಂದು ಮಿಲಿಯನ್ ಡಾಲರ್‌ಗೆ ಬೇಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2023, 6:27 IST
Last Updated 24 ನವೆಂಬರ್ 2023, 6:27 IST
<div class="paragraphs"><p>ಛತ್ರಪತಿ ಶಿವಾಜಿ ಮಹಾರಾಜ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ</p></div>

ಛತ್ರಪತಿ ಶಿವಾಜಿ ಮಹಾರಾಜ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

   

-ಪಿಟಿಐ ಚಿತ್ರ

ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್– 2 ಅನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇ–ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗುರುವಾರ ಬೆಳಿಗ್ಗೆ ಇ–ಮೇಲ್ ಬಂದಿದ್ದು, ಸ್ಫೋಟ ತಡೆಯಬೇಕಿದ್ದರೆ ಮುಂದಿನ 48 ಗಂಟೆಗಳಲ್ಲಿ ಬಿಟ್‌ಕಾಯಿನ್‌ನಲ್ಲಿ ಒಂದು ಮಿಲಿಯನ್ ಡಾಲರ್‌ ನೀಡುವಂತೆ ಆರೋಪಿ ಬೇಡಿಕೆಯಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಲಿಮಿಟೆಡ್‌ (ಎಂಐಎಎಲ್‌) ದಾಖಲಿಸಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 385 ಮತ್ತು 505 (1) (b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.