ADVERTISEMENT

ಮುಂಬೈ: ಶೂನಲ್ಲಿ ಬಚ್ಚಿಟ್ಟು ₹6.3 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆ!

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2025, 3:11 IST
Last Updated 13 ಏಪ್ರಿಲ್ 2025, 3:11 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಮುಂಬೈ: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನನ್ನು ಬಂಧಿಸಿದ್ದು, ಆತ ಶೂಗಳಲ್ಲಿ ಬಚ್ಚಿಟ್ಟಿದ್ದ ₹6.3 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಚಿನ್ನದ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದ ಸಂಭಾವ್ಯ ಖರೀದಿದಾರನನ್ನು ಕೂಡ ಬಂಧಿಸಲಾಗಿದೆ ಎಂದು ಡಿಆರ್‌ಐ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಬ್ಯಾಂಕಾಕ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ತಡೆದಿದ್ದಾರೆ.

ಶೋಧದ ವೇಳೆ ಶೂಗಳಲ್ಲಿ ಅಡಗಿಸಿಟ್ಟಿದ್ದ ₹ 6.3 ಕೋಟಿ ಮೌಲ್ಯದ 6.7 ಕೆ.ಜಿ ಚಿನ್ನದ ಗಟ್ಟಿಗಳು ಪತ್ತೆಯಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆತನ ವಿಚಾರಣೆ ವೇಳೆ ಸಂಭಾವ್ಯ ಖರೀದಿದಾರನ ಹೆಸರು ಬಾಯಿ ಬಿಟ್ಟಿದ್ದು ಆತನನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.