ತಹವ್ವುರ್ ರಾಣಾ
(ಪಿಟಿಐ ಸಂಗ್ರಹ ಚಿತ್ರ)
ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ (26/11) ಸಂಚುಕೋರ ತಹವ್ವುರ್ ರಾಣಾನ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ ನ್ಯಾಯಾಲಯವೊಂದು ಆಗಸ್ಟ್ 13ರವರೆಗೆ ವಿಸ್ತರಿಸಿದೆ.
ಈ ಹಿಂದೆ ರಾಣಾನ ನ್ಯಾಯಾಂಗ ಬಂಧನ ಜುಲೈ 9ರವರೆಗೆ ವಿಸ್ತರಿಸಲಾಗಿತ್ತು. ಅದರಂತೆ ಇಂದು (ಬುಧವಾರ) ತಿಹಾರ್ ಜೈಲಿನಲ್ಲಿರುವ ರಾಣಾನನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು.
ವಿಶೇಷ ನ್ಯಾಯಾಧೀಶರಾದ ಚಂದೆರ್‌ಜೀತ್ ಸಿಂಗ್ ಅವರು ಪ್ರಕರಣದ ವಿಚಾರಣೆ ನಡೆಸಿ ಆದೇಶವನ್ನು ಹೊರಡಿಸಿದ್ದಾರೆ.
2011ರಲ್ಲಿ ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಡೇವಿಡ್ ಕೋಲ್ಮನ್ ಹೆಡ್ಲಿಯ ಆಪ್ತನಾಗಿದ್ದ ರಾಣಾನನ್ನು ಅಮೆರಿಕವು ಏಪ್ರಿಲ್‌ನಲ್ಲಿ ಭಾರತಕ್ಕೆ ಹಸ್ತಾಂತರಿಸಿತ್ತು. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ಉಗ್ರರ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.