ADVERTISEMENT

ಕುಟುಂಬದವರಿಗೆ ದೂರವಾಣಿ ಕರೆ ಮಾಡಲು ರಾಣಾ ಮನವಿ: ಪ್ರತಿಕ್ರಿಯೆ ಕೇಳಿದ ಕೋರ್ಟ್

ಪಿಟಿಐ
Published 25 ಜುಲೈ 2025, 15:54 IST
Last Updated 25 ಜುಲೈ 2025, 15:54 IST
..
..   

ನವದೆಹಲಿ: ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡಲು ತಮಗೆ ಅನುಮತಿ ನೀಡಬೇಕು ಎಂದು ಕೋರಿ 26/11ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ಹುಸೇನ್ ರಾಣಾ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯವೊಂದು ತಿಹಾರ್‌ ಜೈಲಿನ ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಶುಕ್ರವಾರ ಕೇಳಿದೆ.ti

ವಿಚಾರಣೆಯನ್ನು ಆಗಸ್ಟ್‌ 1ಕ್ಕೆ ಮುಂದೂಡಿರುವ ವಿಶೇಷ ನ್ಯಾಯಮೂರ್ತಿ ಚಂದ್ರಜಿತ್‌ ಸಿಂಗ್‌ ಅವರು, ತಿಹಾರ್‌ ಜೈಲಿನ ಸೂಪರಿಂಟೆಂಡೆಂಟ್‌ಗೆ ವಿವರವಾದ ಪ್ರತಿಕ್ರಿಯೆ ನೀಡುವಂತೆ ಹೇಳಿದ್ದಾರೆ.

ಈ ಮಧ್ಯೆ ರಾಣಾ ಅವರಿಗೆ ಹಾಸಿಗೆಯನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ರಾಣಾ, 26/11 ಮುಂಬೈ ದಾಳಿಯ ಮುಖ್ಯ ಸಂಚುಕೋರ, ಅಮೆರಿಕದ ಪ್ರಜೆ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ನಿಕಟವರ್ತಿ. ಭಾರತಕ್ಕೆ ರಾಣಾ ಅವರನ್ನು ಹಸ್ತಾಂತರಿಸುವ ವಿರುದ್ಧ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಏಪ್ರಿಲ್ 4ರಂದು ಅಮೆರಿಕ ಸುಪ್ರೀಂ ಕೋರ್ಟ್‌ ವಜಾ ಮಾಡಿತ್ತು. ಆನಂತರ ಭಾರತಕ್ಕೆ ರಾಣಾನನ್ನು ಬಂಧಿಸಿ ಕರೆತರಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.