ADVERTISEMENT

ಮಹಾರಾಷ್ಟ್ರ: ಏಳು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, 80 ಮಂದಿ ರಕ್ಷಣೆ

ಐಎಎನ್ಎಸ್
Published 15 ಮಾರ್ಚ್ 2023, 14:38 IST
Last Updated 15 ಮಾರ್ಚ್ 2023, 14:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈನ ಏಳು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 80 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಸಂಜೆ 5.15ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ದಟ್ಟ ಹೊಗೆಯಿಂದಾಗಿ ಸ್ಥಳೀಯರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.