
ಪಿಟಿಐಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ಮುಂಬೈ: ಇಲ್ಲಿನ ಮುಂಬೈ ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ (ಬೆಸ್ಟ್) ಬಸ್ಸೊಂದು ಸೋಮವಾರ ರಾತ್ರಿ ಹಿಮ್ಮುಖವಾಗಿ ಚಲಿಸಿದ ವೇಳೆ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
‘ಮುಂಬೈನ ಭಂಡಪ್ ಪ್ರದೇಶದ ಸ್ಟೇಷನ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಬಸ್ ಹಿಮ್ಮುಖವಾಗಿ ಚಲಿಸಿದ ವೇಳೆ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.