ADVERTISEMENT

ಚಲಿಸುತ್ತಿದ್ದ ಬಸ್‌ನಲ್ಲಿ ಗಂಡು ಮಗುವಿಗೆ ಜನ್ಮ: ತಾಯಿ ಮಾಡಿದ್ದೇನು ಗೊತ್ತಾ?

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 7:30 IST
Last Updated 16 ಜುಲೈ 2025, 7:30 IST
   

ಮುಂಬೈ: ಮಹಿಳೆಯೊಬ್ಬರು ಚಲಿಸುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ಶಿಶುವಿಗೆ ಜನ್ಮ ನೀಡಿದ್ದಾರೆ. ಆ ಬಳಿಕ ಮಗುವನ್ನು ಕಿಟಕಿಯಿಂದ ಹೊರಕ್ಕೆ ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕಿಟಕಿಯಿಂದ ಎಸೆದಿದ್ದ ಮಗು ಸಾವಿಗೀಡಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿನ್ನೆ (ಮಂಗಳವಾರ) ರಾತ್ರಿ ಈ ಘಟನೆ ನಡೆದಿದೆ. ಪುಣೆಯಿಂದ ಪರ್ಭಾನಿಗೆ ಸಂಚಾರಿಸುವ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಮಹಿಳೆ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಆಗಾ ತಾನೇ ಜನಿಸಿದ ಗಂಡು ಮಗುವನ್ನು ಮಹಿಳೆ ಮತ್ತು ಆಕೆಯ ಪತಿ ಕಿಟಕಿಯಿಂದ ಹೊರಕ್ಕೆ ಎಸೆದಿರುವುದಾಗಿ ತಿಳಿದು ಬಂದಿದೆ.

ADVERTISEMENT

ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಬಟ್ಟೆಯಿಂದ ಸುತ್ತಿ ಬಿಸಾಡಿದ್ದ ಮಗುವನ್ನು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರಿತಿಕಾ ಧೇರೆ ಮತ್ತು ಆಕೆಯ ಪತಿ ಅಲ್ತಾಫ್ ಶೇಖ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.