ADVERTISEMENT

ಮುಂಬೈನ 60ಕ್ಕೂ ಹೆಚ್ಚು ಸಂಸ್ಥೆಗಳಿಗೆ ಹುಸಿ ಬಾಂಬ್‌ ಬೆದರಿಕೆ

ಪಿಟಿಐ
Published 20 ಜೂನ್ 2024, 3:28 IST
Last Updated 20 ಜೂನ್ 2024, 3:28 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಮುಂಬೈ: ಮುಂಬೈನ 60ಕ್ಕೂ ಹೆಚ್ಚು ಸಂಸ್ಥೆಗಳಿಗೆ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆಯ ಇ– ಮೇಲ್‌ ಕಳುಹಿಸಿದ್ದ ಆರೋಪದಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ( ಜೂನ್‌ 17) ಮತ್ತು ಮಂಗಳವಾರ ಈ ಬೆದರಿಕೆಯ ಇ– ಮೇಲ್‌ಗಳನ್ನು ಸ್ವೀಕರಿಸಲಾಗಿದೆ. ಬೃಹತ್‌ ಮುಂಬೈ ನಗರ ಪಾಲಿಕೆ ಸೇರಿದಂತೆ ಶಾಲೆ, ಕಾಲೇಜು, ಇನ್ನಿತರ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆಯೊಡ್ಡಲಾಗಿತ್ತು ಎಂದು ತಿಳಿಸಿದ್ದಾರೆ.

ADVERTISEMENT

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಬೆದರಿಕೆ ಬಂದ ಎಲ್ಲಾ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಆದರೆ ಅನುಮಾನಾಸ್ಪದವಾಗಿ ಯಾವುದೇ ವಸ್ತುಗಳು ಕಂಡು ಬಂದಿಲ್ಲ. ಅಪರಿಚಿತರು ಕಿಡಿಗೇಡಿತನ ಎಸೆಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸಂಬಂಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.