ಮತದಾನ
ಮುಂಬೈ: ಬೃಹನ್‌ಮುಂಬೈ ಮಹಾನಗರಪಾಲಿಕೆ ಚುನಾವಣೆಯ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ಶೇ. 47 ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಲವು ಮತಗಟ್ಟೆ ಹಾಗೂ ಮತಕೇಂದ್ರಗಳಲ್ಲಿ ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಧಾರವಿ, ಮುಂಬೈ ಕೇಂದ್ರ, ಶಿವಾಜಿ ಟರ್ಮಿನಲ್, ಬಾಂದ್ರಾದ ಕೆಲವು ಮತಗಟ್ಟೆಗಳಲ್ಲಿ ಸಣ್ಣಪುಟ ಗಲಾಟೆಗಳು ನಡೆದಿವೆ. ಪೊಲೀಸರು ಹಾಗೂ ಚುನಾವಣೆ ಅಧಿಕಾರಿಗಳು ಮಧ್ಯಪ್ರವೇಶ ಮಾಡಿ ಗಲಾಟೆಯನ್ನು ನಿಯಂತ್ರಣಕ್ಕೆ ತಂದಿದ್ದು ಈ ಸ್ಥಳಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರದಾದ್ಯಂತ 28,000ಕ್ಕೂ ಅಧಿಕ ಮಂದಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
227 ವಾರ್ಡ್‌ಗಳ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ(ಬಿಎಂಸಿ) ಬೆಳಿಗ್ಗೆ 7.30ಕ್ಕೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.
10 ಹೆಚ್ಚುವರಿ ಆಯುಕ್ತರು, 33 ಉಪ ಆಯುಕ್ತರು ಮತ್ತು 84 ಸಹಾಯಕ ಪೊಲೀಸ್ ಆಯುಕ್ತರು ಸೇರಿದಂತೆ 25,000ಕ್ಕೂ ಹೆಚ್ಚು ಕಾನ್‌ಸ್ಟೆಬಲ್‌ಗಳು, 3,000 ಅಧಿಕಾರಿಗಳನ್ನು ನಗರದ ವಿವಿಧ ಮತಗಟ್ಟೆಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.