ADVERTISEMENT

ಮುಂಬೈ: 8ನೇ ತರಗತಿ ಬಾಲಕರಿಂದ ಸಹಪಾಠಿ ಮೇಲೆ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲು

ಪಿಟಿಐ
Published 2 ಡಿಸೆಂಬರ್ 2022, 11:41 IST
Last Updated 2 ಡಿಸೆಂಬರ್ 2022, 11:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಇಲ್ಲಿನ ಮಾಟುಂಗಾಪ್ರದೇಶದ ಶಾಲೆಯೊಂದರಲ್ಲಿ ಇಬ್ಬರು ಬಾಲಕರು ತರಗತಿಯಲ್ಲಿಯೇ 13 ವರ್ಷದ ಸಹಪಾಠಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸೋಮವಾರ, ಉಳಿದ ಸಹಪಾಠಿಗಳು ನೃತ್ಯ ಕಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪರಿಸ್ಥಿತಿಯ ಲಾಭ ಪಡೆದ ಬಾಲಕರಿಬ್ಬರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಬಾಲಕಿ ತನ್ನ ಮೇಲಾದ ದೌರ್ಜನ್ಯವನ್ನು ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದು, ಕೂಡಲೇ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 ಡಿಎ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕರು ಮತ್ತು ಸಂತ್ರಸ್ತೆ ಮೂವರೂ ಎಂಟನೇ ತರಗತಿ ಓದುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಬಾಲಕರನ್ನು ಬಾಲನ್ಯಾಯಾಲಯದ ಮುಂದೆ ಹಾಜರುಪಡಿಸಿ ನಂತರ ದಕ್ಷಿಣ ಮುಂಬೈನ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.