ADVERTISEMENT

Bomb Threat to RBI: ಗುಜರಾತ್‌ ಮೂಲದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2023, 10:36 IST
Last Updated 27 ಡಿಸೆಂಬರ್ 2023, 10:36 IST
<div class="paragraphs"><p>ಆರ್‌ಬಿಐ ಕಡತ ಚಿತ್ರ</p></div>

ಆರ್‌ಬಿಐ ಕಡತ ಚಿತ್ರ

   

– ರಾಯಿಟರ್ಸ್ ಚಿತ್ರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ), ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಸೇರಿದಂತೆ 11 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇ–ಮೇಲ್ ಕಳುಹಿಸಿದ್ದ ವ್ಯಕ್ತಿಯನ್ನು ಮುಂಬೈನ ಕ್ರೈಂ ಬ್ರಾಂಚ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ADVERTISEMENT

ಇ–ಮೇಲ್ ಹಿಂದಿರುವ ಉದ್ದೇಶವನ್ನು ಅರಿತುಕೊಳ್ಳಲು ವಿಚಾರಣೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನ ವಡೋದರ ಮೂಲದ ವ್ಯಕ್ತಿ ಬಂಧನಕ್ಕೊಳಗಾದವ.

ಆರ್‌ಬಿಐ ಕಚೇರಿ, ಎಚ್‌ಡಿಎಫ್‌ಸಿ ಹಾಗೂ ಐಸಿಸಿಐ ಬ್ಯಾಂಕ್‌ ಸೇರಿದಂತೆ ಮುಂಬೈ 11 ಕಡೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಆರ್‌ಬಿಐಗೆ ಆರೋಪಿ ಇ–ಮೇಲ್ ಮಾಡಿದ್ದ. ಅಲ್ಲದೆ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹವೂ ಅದರಲ್ಲಿ ಇತ್ತು.

ಇ–ಮೇಲ್‌ನಲ್ಲಿದ್ದ 11 ತಾಣಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅಲ್ಲಿ ಬಾಂಬ್ ಅಥವಾ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.