ADVERTISEMENT

ಮುಂಬೈ: ಭಾರಿ ಮಳೆಗೆ ಸಂಚಾರ ಅಸ್ತವ್ಯಸ್ತ

ಪಿಟಿಐ
Published 28 ಜೂನ್ 2019, 19:18 IST
Last Updated 28 ಜೂನ್ 2019, 19:18 IST
   

ಮುಂಬೈ: ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, ಇದರಿಂದ ಹಲವು ಕಡೆಗಳಲ್ಲಿ ರಸ್ತೆ ಸಂಚಾರ ದಟ್ಟಣೆ ಉಂಟಾಗಿತ್ತು. ಕೇಂದ್ರ ಹಾಗೂ ಪಶ್ಚಿಮ ವಿಭಾಗದಲ್ಲಿ ಉಪನಗರ ರೈಲುಗಳು ಸಂಚಾರ ವೇಳೆ ವ್ಯತ್ಯಯವಾಗಿತ್ತು.

ನಗರದಲ್ಲಿ ಸರಾಸರಿ 43.23 ಮಿ.ಮೀ., ಪೂರ್ವ ಉಪನಗರಗಳಲ್ಲಿ 64.14 ಮಿ.ಮೀ. ಹಾಗೂ ಪಶ್ಚಿಮ ಉಪನಗರಗಳಲ್ಲಿ 78.21 ಮಿ.ಮೀ ಮಳೆಯಾಗಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್ (ಬಿಎಂಸಿ) ಹೇಳಿದೆ.

‘ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಲಿದ್ದು, ಇದರಿಂದ ನಗರಕ್ಕೆ ನೀರು ಪೂರೈಸಲು ಸಹಾಯವಾಗುತ್ತದೆ’ ಎಂದು ಬಿಎಂಸಿ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.