ADVERTISEMENT

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಹಾ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

​ಪ್ರಜಾವಾಣಿ ವಾರ್ತೆ
Published 11 ಮೇ 2020, 7:28 IST
Last Updated 11 ಮೇ 2020, 7:28 IST
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ   

ಮುಂಬೈ: ಮೇ 21 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಅವಿರೋಧವಾಗಿ ಮಹಾರಾಷ್ಟ್ರ ವಿಧಾನಪರಿಷತ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಮೈತ್ರಿಯಿಂದ ಸರ್ಕಾರ ರಚನೆಯಾಗಿದ್ದು, ಶಿವಸೇನಾ ಮುಖ್ಯಸ್ಥ ಉದ್ದವ್‌ ಠಾಕ್ರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ಆರು ತಿಂಗಳ ಒಳಗೆ ಅವರು ಶಾಸಕರಾಗಲೇಬೇಕಿರುವ ಅನಿವಾರ್ಯತೆ ಇತ್ತು. ಆ ಕಾರಣ ಮೇ 21 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾಮಪತ್ರ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.