ADVERTISEMENT

ಮುಂಬೈ | ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿ ಕಂದಕಕ್ಕೆ ಉರುಳಿದ ಬಸ್, ಐವರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜುಲೈ 2024, 2:34 IST
Last Updated 16 ಜುಲೈ 2024, 2:34 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

(ಐಸ್ಟೋಕ್)

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರ್ಯಾಕ್ಟರ್‌ಗೆ ಡಿಕ್ಕಿಯಾದ ಬಸ್ ಕಂದಕಕ್ಕೆ ಉರುಳಿ ಬಿದ್ದು ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮಂಗಳವಾರ ರಾತ್ರಿ ದುರ್ಘಟನೆ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನವಿ ಮುಂಬೈ ಪೊಲೀಸ್‌ನ ಡಿಸಿಪಿ ಪಂಕಜ್ ದಹಾನೆ ತಿಳಿಸಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.

ಯಾತ್ರಾರ್ಥಿಗಳು ಏಕಾದಶಿ ಹಬ್ಬದ ಆಚರಣೆಗಾಗಿ ಡೊಂಬಿವಲಿಯ ಕೇಸರ್ ಗ್ರಾಮದಿಂದ ಪಂಡರಾಪುರಕ್ಕೆ ಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಕ್ರೇನ್ ಸಹಾಯದಿಂದ ಬಸ್ ಮೇಲಕ್ಕೆತ್ತಲಾಯಿತು. ಇದರಿಂದಾಗಿ ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯ ಮುಂಬೈ-ಲೋಣಾವಳ ಲೇನ್‌ನಲ್ಲಿ ಮೂರು ತಾಸುಗಳ ಬಳಿಕ ಸಂಚಾರ ಪುನಃಸ್ಥಾಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.