ADVERTISEMENT

ಮುಂಬೈ: ಅಪರಿಚಿತರಿಂದ ಗುಂಡಿನ ದಾಳಿ– ಯುವಕ ಸಾವು, ಮೂವರಿಗೆ ಗಾಯ

ಪಿಟಿಐ
Published 1 ಅಕ್ಟೋಬರ್ 2022, 11:11 IST
Last Updated 1 ಅಕ್ಟೋಬರ್ 2022, 11:11 IST
   

ಮುಂಬೈ:ಬೈಕ್‌ನಲ್ಲಿ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ 26 ವರ್ಷದ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉಪನಗರ ಕಾಂದಿವಲಿ ಬಳಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಲಿಂಕ್ ರಸ್ತೆಯ ಲಾಲ್ಜಿಪಾಡಾದಲ್ಲಿ ನಡೆದಿದೆ.ಸಂತ್ರಸ್ತರು ಗುಂಪಿನಲ್ಲಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಅಂಕಿತ್‌ ಯಾದವ್‌ ಎಂದು ಗುರುತಿಸಲಾಗಿದೆ. ಕಳೆದ ತಿಂಗಳು ಕೃಷ್ಣಾ ಜನ್ಮಾಷ್ಟಮಿ ವೇಳೆ ಮೃತ ವ್ಯಕ್ತಿ ಹಾಗೂ ದುಷ್ಕರ್ಮಿಗಳ ನಡುವೆ ಜಗಳ ನಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.