ADVERTISEMENT

ಅಶ್ಲೀಲ ಚಿತ್ರಗಳ ಪ್ರಕರಣ: ಮತ್ತೊಬ್ಬನನ್ನು ಬಂಧಿಸಿದ ಮುಂಬೈ ಪೊಲೀಸರು

ಪಿಟಿಐ
Published 20 ಜುಲೈ 2021, 9:39 IST
Last Updated 20 ಜುಲೈ 2021, 9:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಅಶ್ಲೀಲ ಚಿತ್ರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಮಂಗಳವಾರ ಬಂಧಿಸಿದ್ದಾರೆ.

ಬಂಧಿತನನ್ನು ರಿಯಾನ್ ಥಾರ್ಪ್ ಎಂದು ಗುರುತಿಸಲಾಗಿದೆ. ಈತನನ್ನು ಉದ್ಯಮಿ ರಾಜ್‌ಕುಂದ್ರಾ ಅವರೊಂದಿಗೆ ‍ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಥಾರ್ಪ್ ಆಪ್‌ ಕಂಪನಿಯಲ್ಲಿ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ನಟಿ ಶಿಲ್ಪಾ ಶೆಟ್ಟಿಯ ಪತಿ ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.