ಸಾಂದರ್ಭಿಕ ಚಿತ್ರ
ಮುಂಬೈ: ಭಯೋತ್ಪಾದಕರು ಹಾಗೂ ಸಮಾಜಘಾತುಕ ಶಕ್ತಿಗಳು ವಿವಿಐಪಿಗಳನ್ನು ಗುರಿಯಾಗಿರಿಸಿ ಡ್ರೋನ್ ದಾಳಿ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳ ಕಾಲ ನಗರದಲ್ಲಿ ಎಲ್ಲ ರೀತಿಯ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ.
ಈ ಕುರಿತು ಮುಂಬೈ ಪೊಲೀಸ್ ಆದೇಶ ಹೊರಡಿಸಿದ್ದು, 2023 ಡಿಸೆಂಬರ್ 20ರಿಂದ 2024 ಜನವರಿ 18ರವರೆಗೆ ಡ್ರೋನ್ ಹಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) 144ನೇ ಸೆಕ್ಷನ್ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ವಿವಿಐಪಿಗಳನ್ನು ಗುರಿಯಾಗಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಅಪಾಯವನ್ನುಂಟು ಮಾಡಲು ಹಾಗೂ ಕಾನೂನು, ಸುವ್ಯವಸ್ಥೆ ಹದಗೆಡಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮದ ಭಾಗವಾಗಿ ನಗರದಲ್ಲಿ ಡ್ರೋನ್, ರಿಮೋಟ್ ನಿಯಂತ್ರಿತ ಮೈಕ್ರೋ ಲೈಟ್ ಏರ್‌ಕ್ರಾಫ್ಟ್, ಹ್ಯಾಂಡ್ ಗ್ಲೈಡರ್, ಹಾಟ್ ಏರ್ ಬಲೂನ್, ಪ್ಯಾರಾಗ್ಲೈಡರ್, ಪ್ಯಾರಾ ಮೋಟರ್‌ಗಳನ್ನು ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.