ಮುಂಬೈ: ನಗರದ ಪೊವೈ ಪ್ರದೇಶದ ಹೋಟೆಲ್ ಮೇಲೆ ದಾಳಿ ಮಾಡಿರುವ ಮುಂಬೈ ಪೊಲೀಸರು ವೇಶ್ಯಾವಾಟಿಕೆ ಜಾಲವನ್ನು ಭೇದಿಸಿದ್ದು, ನಾಲ್ವರು ನಟಿಯರನ್ನು ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಹೋಟೆಲ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿ ಶ್ಯಾಮ್ ಸುಂದರ್ ಅರೋರಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಟಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ. ಈ ಜಾಲದಲ್ಲಿ ಸಿಲುಕಿದ್ದ ನಟಿಯರನ್ನು ರಕ್ಷಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯರಲ್ಲಿ ಒಬ್ಬರು ಹಿಂದಿ ಧಾರಾವಾಹಿಯಲ್ಲಿ ಕೆಲಸ ಮಾಡಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಕೆ ಪ್ರಗತಿಯಲ್ಲಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.