ADVERTISEMENT

ನಕಲಿ ಟಿಆರ್‌ಪಿ ಹಗರಣ: ದೋಷಾರೋಪ ಪಟ್ಟಿ ಸಲ್ಲಿಕೆ

ಪಿಟಿಐ
Published 24 ನವೆಂಬರ್ 2020, 7:57 IST
Last Updated 24 ನವೆಂಬರ್ 2020, 7:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ನಕಲಿ ಟಿಆರ್‌ಪಿ (ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್‌) ಹಗರಣ ಸಂಬಂಧ ಮುಂಬೈ ಪೊಲೀಸರು ನ್ಯಾಯಾಲಯದಲ್ಲಿ ಮಂಗಳವಾರ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಹಗರಣದ ವಿಚಾರಣೆ ನಡೆಸುತ್ತಿರುವ ಅಪರಾಧ ಗುಪ್ತಚರ ಕೇಂದ್ರವು (ಸಿಐಯು) ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈಗಾಗಲೇ ಈ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕೆಲ ವಾಹಿನಿಗಳು ಚಾನೆಲ್‌ಗಳು ಟಿಆರ್‌ಪಿಯಲ್ಲಿ ವಂಚನೆ ನಡೆಸಿವೆ ಎಂದು ಆರೋಪಿಸಿ ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್ ಇಂಡಿಯಾ (ಬಾರ್ಕ್‌) ಹನ್ಸಾ ರಿಸರ್ಚ್‌ ಗ್ರೂಪ್‌ ಮೂಲಕ ಪ್ರಕರಣ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.