ADVERTISEMENT

ಮುಂಬೈ: ಕುಡಿದ ಮತ್ತಿನಲ್ಲಿ ಸರಣಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ, ಆರೋಪಿ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಆಗಸ್ಟ್ 2023, 11:27 IST
Last Updated 6 ಆಗಸ್ಟ್ 2023, 11:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ನಗರದಲ್ಲಿ ಸಂಚರಿಸುವ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಜುಹು ಪ್ರದೇಶದ 25 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಆರೋಪಿ, ನಾನು ಜುಹು ವಿಲೆ ಪಾರ್ಲೆ ಪ್ರದೇಶದಿಂದ ಕರೆ ಮಾಡುತ್ತಿದ್ದೇನೆ. ಮುಂಬೈನ ಲೋಕಲ್ ರೈಲಿನಲ್ಲಿ ಬಾಂಬ್ ಇಡಲಾಗಿದೆ. ಜತೆಗೆ, ನಗರದಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆಯಲಿವೆ ಎಂದು ಹೇಳಿಕೊಂಡಿದ್ದ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಮೊಬೈಲ್ ಫೋನ್ ಸಂಖ್ಯೆಯ ಟವರ್‌ ಲೋಕೆಷನ್‌ ಪರಿಶೀಲಿಸಿ ಆರೋಪಿಯನ್ನು ಜುಹು ಪ್ರದೇಶದಲ್ಲಿ ಬಂಧಿಸಲಾಗಿದೆ. ಆತ ಅಲ್ಲಿಂದಲೆ ಬೆದರಿಕೆ ಕರೆ ಮಾಡಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಮೊಬೈಲ್ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇವನ್ನೂ ಓದಿ...

ಸಿ.ಎಂ. ಸ್ಟಾಲಿನ್‌ಗೆ ಹಿಂದಿ, ಇಂಗ್ಲಿಷ್ ಮಾತನಾಡಲು ಬರುವುದಿಲ್ಲ: ಅಣ್ಣಾಮಲೈ ಲೇವಡಿ

ಹರಿಯಾಣ: ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ, ಸಿಪಿಐ ನಿಯೋಗಕ್ಕೆ ಪೊಲೀಸರ ತಡೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.