ಮುಂಬೈ: ₹60 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರಿಗೆ ಮುಂಬೈ ಪೊಲೀಸರು ಲುಕ್ಔಟ್ ನೋಟಿಸ್ ನೀಡಿದ್ದಾರೆ.
ಶಿಲ್ಪಾ ಮತ್ತು ರಾಜ್ ದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸ ಮಾಡುತ್ತಿದ್ದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದರು.
ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿಯೊಬ್ಬರಿಗೆ ₹60 ಕೋಟಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಜುಹು ಠಾಣೆಯಲ್ಲಿ ದಂಪತಿ ವಿರುದ್ಧ ಆ.14ರಂದು ಪ್ರಕರಣ ದಾಖಲಾಗಿದೆ.
ವ್ಯಕ್ತಿಯು ದೇಶದಿಂದ ಹೊರಹೋಗುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.