ವಾಣಿಜ್ಯ ನಗರಿ ಮುಂಬೈಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉಪನಗರದ ರೈಲ್ವೆ ಹಳಿಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರಕ್ಕೆ ತೊಡಕಾಗಿದೆ.
(ಪಿಟಿಐ ಚಿತ್ರ)
ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.
ಕಳೆದ 24 ಗಂಟೆಗಳಲ್ಲಿ ಮುಂಬೈಯ ಹಲವಾರು ಪ್ರದೇಶಗಳಲ್ಲಿ 200 ಮಿ.ಮೀ.ಗಿಂತಲೂ ಹೆಚ್ಚು ಮಳೆಯಾಗಿದೆ.
ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತಿ ಹೆಚ್ಚು 255.5 ಮಿ.ಮೀ. ಮಳೆಯಾಗಿದೆ.
ಮುಂಬೈಯಲ್ಲಿ ಭಾರಿ ಮಳೆಯಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಬೈಯಲ್ಲಿ ಇಂದು (ಮಂಗಳವಾರ) ಸರ್ಕಾರಿ ಕಚೇರಿಗಳನ್ನು ಮುಚ್ಚುಗಡೆಗೊಳಿಸಲಾಗಿದೆ. ಖಾಸಗಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.
ಮಳೆಯ ನಡುವೆ ಜೀವನೋಪಾಯಕ್ಕಾಗಿ ತರಕಾರಿ ಮಾರಾಟಕ್ಕೆ ತೆರಳಿರುವ ವ್ಯಾಪಾರಿ
ಭಾರಿ ಮಳೆಯಲ್ಲೇ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿರುವ ದೃಶ್ಯ
ಭಾರಿ ಮಳೆಯಿಂದಾಗಿ ಸವಾರರಿಗೆ ಸಂಕಷ್ಟ ಎದುರಾಗಿದೆ.
ಮುಂಬೈ ಮಳೆ, ಜನಸಾಮಾನ್ಯರಿಗೆ ಸಂಕಷ್ಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.