ADVERTISEMENT

ಮುಂಬೈ ದೈನಂದಿನ ಕೊರೊನಾ ಸೋಂಕು ಪ್ರಕರಣ 10 ಸಾವಿರಕ್ಕಿಂತಲೂ ಕಡಿಮೆ ದಾಖಲು

ಪಿಟಿಐ
Published 16 ಜನವರಿ 2022, 15:45 IST
Last Updated 16 ಜನವರಿ 2022, 15:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೊನಾ ಸೋಂಕು ಪ್ರಕರಣ ಇಳಿಮುಖವಾಗಿವೆ. ಭಾನುವಾರ ಸಂಜೆಯ ವೇಳೆಗೆ ಕೊನೆಗೊಂಡಂತೆ 24 ತಾಸಿನ ಅವಧಿಯಲ್ಲಿ 7,895 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಈ ಮೂಲಕ ದೈನಂದಿನ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತಲೂ ಕಡಿಮೆ ದಾಖಲಾಗಿವೆ. ಶನಿವಾರದಂದು ಮುಂಬೈನಲ್ಲಿ 10,661 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ಇದೇ ಅವಧಿಯಲ್ಲಿ ಸೋಂಕಿನಿಂದಾಗಿ 11 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಸಕ್ರಿಯ ಪ್ರಕರಣಗಳ ಸಂಖ್ಯೆ 60,371ಕ್ಕೆ ತಲುಪಿದೆ. 21,025 ಮಂದಿ ಗುಣಮುಖರಾಗಿದ್ದು, 688 ಮಂದಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒಟ್ಟಾರೆಯಾಗಿ ಮಹಾರಾಷ್ಟ್ರದಲ್ಲಿ ಕೋವಿಡ್ ದೃಢಪಟ್ಟ 41,327 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 29 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಸೋಂಕಿನ ಎಂಟು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣ 1,738ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.