ADVERTISEMENT

ಶಿವಸೇನೆ ಶಾಸಕರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಪಿಟಿಐ
Published 18 ಏಪ್ರಿಲ್ 2022, 4:46 IST
Last Updated 18 ಏಪ್ರಿಲ್ 2022, 4:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಸ್ಥಳೀಯ ಶಿವಸೇನೆ ಶಾಸಕರೊಬ್ಬರ ಪತ್ನಿ ಭಾನುವಾರ ರಾತ್ರಿ ಕುರ್ಲಾ ಉಪನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸೇನಾ ಶಾಸಕ ಮಂಗೇಶ್ ಕುಡಾಳ್ಕರ್ ಅವರ ಪತ್ನಿಯಾದ ರಜನಿ ಕುಡಾಳ್ಕರ್ ಅವರ ಮೃತದೇಹ ನೆಹರು ನಗರದ ಡಿಗ್ನಿಟಿ ಕೋಆಪರೇಟಿವ್ ಸೊಸೈಟಿ ಫ್ಲಾಟ್‌ನಲ್ಲಿ ರಾತ್ರಿ 8.30ರ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಎಡಿಆರ್ ದಾಖಲಾಗಿದೆ ಮತ್ತು ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಮಂಗೇಶ್ ಕುಡಾಳ್ಕರ್ ಅವರು ಕುಲ್ರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.