ಮಹಾರಾಷ್ಟ್ರ: ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಪಾಲ್ಘರ್, ಥಾಣೆ, ರಾಯ್‌ಗಡ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.
ಈ ಕುರಿತು ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಪ್ರತಿಕ್ರಿಯಿಸಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
‘ಮುಂಜಾನೆ 3 ಗಂಟೆ ಸುಮಾರಿಗೆ ಮುಂಬೈ ನಗರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ 200 ಮಿ.ಮೀ ಮಳೆಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಬಿಎಂಸಿ ಅಧಿಕಾರಿಗಳ ತಂಡಗಳು ಧಾವಿಸಿದ್ದು, ನೀರು ಹೊರಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆದಿತ್ಯ ಠಾಕ್ರೆ ಟ್ವೀಟ್ ಮಾಡಿದ್ದಾರೆ.
‘ಮುಂಬೈನಲ್ಲಿ ಅತಿ ಕಡಿಮೆ ಸಮಯದಲ್ಲಿ ಭಾರಿ ಮಳೆಯಾಗಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ’ ಎಂದು ಪುಣೆಯ ಹವಾಮಾನ ಮತ್ತು ಸಂಶೋಧನಾ ಸೇವೆಗಳ (ಎಸ್‌ಐಡಿ) ಮುಖ್ಯಸ್ಥ ಕೆ.ಎಸ್.ಹೊಸಾಲಿಕರ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.