ADVERTISEMENT

ಮುಂಬೈನ ಸಾಯನ್‌ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ಹಲ್ಲೆ: ಇಬ್ಬರು ವಶಕ್ಕೆ

ಪಿಟಿಐ
Published 18 ಆಗಸ್ಟ್ 2024, 13:26 IST
Last Updated 18 ಆಗಸ್ಟ್ 2024, 13:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ಇಲ್ಲಿನ ಸಾಯನ್‌ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 

ಅಪಘಾತ ಪ್ರಕರಣಗಳ ಚಿಕಿತ್ಸಾ ವಿಭಾಗದಲ್ಲಿದ್ದ ವೈದ್ಯೆಯ ಮೇಲೆ ಭಾನುವಾರ ಬೆಳಿಗ್ಗೆ ಹಲ್ಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

‘ರೋಗಿಯ ಜತೆ ಬಂದಿದ್ದವರು ವೈದ್ಯೆಯ ಜತೆ ಮಾತಿನ ಚಕಮಕಿ ನಡೆಸಿ, ಹಲ್ಲೆ ಮಾಡಿದ್ದಾರೆ. ಅದರಲ್ಲಿ ಇಬ್ಬರು ಮಹಿಳೆಯರೂ ಇದ್ದರು. ಆಸ್ಪತ್ರೆಯ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆಮಾಡಿ ವಿಷಯ ತಿಳಿಸಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

‘ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಮಹಾರಾಷ್ಟ್ರ ವೈದ್ಯಕೀಯ ಸೇವೆ ಸಿಬ್ಬಂದಿ ಮತ್ತು ವೈದ್ಯಕೀಯ ಸೇವೆ ಸಂಸ್ಥೆಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.

ಲೋಕಮಾನ್ಯ ತಿಲಕ್ ಮುನಿಸಿಪಲ್ ಜನರಲ್‌ ಆಸ್ಪತ್ರೆಯನ್ನು ಸಾಯನ್‌ ಆಸ್ಪತ್ರೆ ಎಂಬ ಹೆಸರಿನಿಂದ ಕರೆಯಲಾಗುತ್ತದೆ. 

‘ರೋಗಿ ಜತೆ ಬಂದಿದ್ದವರು ಪಾನಮತ್ತರಾಗಿದ್ದರು. ಹಲ್ಲೆಕೋರರಿಗೆ ಪ್ರತಿರೋಧ ತೋರುವಾಗ ವೈದ್ಯೆ ಗಾಯಗೊಂಡಿದ್ದಾರೆ’ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.