ಮುಂಬೈ: ಪತ್ನಿಯನ್ನು ಚಲಿಸುತ್ತಿರುವ ರೈಲಿನಿಂದ ಹೊರದಬ್ಬಿ, ಹತ್ಯೆಗೈದಿರುವ ಆರೋಪದಡಿ ವ್ಯಕ್ತಿಯೊಬ್ಬನನ್ನು ಮುಂಬೈನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.
‘ಸೋಮವಾರ ಮಧ್ಯಾಹ್ನ ಚೆಂಬೂರು ಮತ್ತು ಗೋವಾಂಡಿ ರೈಲ್ವೆ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದ್ದು, ಮಹಿಳೆಯ ಪತಿಯನ್ನು ಬಂಧಿಸಲಾಗಿದೆ’ ಎಂದು ಅವರು ಹೇಳಿದರು.
ಎರಡು ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ, ಮಂಕುರ್ದು ಪ್ರಾಂತ್ಯದಲ್ಲಿ ವಾಸವಾಗಿದ್ದರು.
‘ಸೋಮವಾರ ಪತಿ ಮತ್ತು ತನ್ನ ಮೊದಲ ಗಂಡನಿಗೆ ಜನಿಸಿದ 7 ವರ್ಷದ ಮಗಳೊಂದಿಗೆಸಂತ್ರಸ್ತೆ, ಸ್ಥಳೀಯ ರೈಲಿನಲ್ಲಿ ಪ್ರಯಣಿಸುತ್ತಿದ್ದರು. ದಂಪತಿ ರೈಲಿನ ಬಾಗಿಲಿನ ಹತ್ತಿರ ನಿಂತಿದ್ದರು. ಈ ವೇಳೆ ಪತ್ನಿಯನ್ನು ಪತಿ ರೈಲಿನಿಂದ ಹೊರ ದಬ್ಬಿದ್ದಾನೆ’ ಎಂದು ರೈಲ್ವೆ ಪೊಲೀಸ್ ಅಧಿಕಾರಿ ತಿಳಿಸಿದರು.
ಅದೇ ರೈಲಿನಲ್ಲಿ ಪ್ರಯಣಿಸುತ್ತಿದ್ದ ಮಹಿಳಾ ಪ್ರಯಣಿಕರೊಬ್ಬರು ಗಂಡ–ಹೆಂಡತಿಯ ಚಟುವಟಿಕೆಗಳನ್ನು ಗಮನಿಸುತ್ತಿದ್ದರು. ಅವರು ಗೋವಾಂಡಿ ನಿಲ್ದಾಣದಲ್ಲಿ ರೈಲ್ವೆ ಪೊಲೀಸರಿಗೆ ಈ ಘಟನೆ ಬಗ್ಗೆ ತಿಳಿಸಿದರು.
‘ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆ ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದರು. ಸದ್ಯ ಆಕೆಯ ಪತಿಯನ್ನು ಬಂಧಿಸಿ, ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.