ADVERTISEMENT

ಮುನಾವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

ಪಿಟಿಐ
Published 2 ಅಕ್ಟೋಬರ್ 2025, 6:45 IST
Last Updated 2 ಅಕ್ಟೋಬರ್ 2025, 6:45 IST
ಮುನಾವರ್ ಫಾರೂಕಿ
ಮುನಾವರ್ ಫಾರೂಕಿ   

ನವದೆಹಲಿ: ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಮುನಾವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ್ದ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಹರಿಯಾಣದ ಪಾಣಿಪತ್‌ ನಿವಾಸಿ ರಾಹುಲ್ ಮತ್ತು ಭಿವಾನಿಯ ಸಾಹಿಲ್ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಈ ಇಬ್ಬರೂ ಆರೋಪಿಗಳು ಫಾರೂಕಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಇದಕ್ಕಾಗಿ ಗ್ಯಾಂಗ್‌ಸ್ಟರ್ ರೋಹಿತ್‌ ಗೋದಾರ ಅವರಿಂದ ಸೂಚನೆಗಳನ್ನು ಪಡೆದುಕೊಳ್ಳುತ್ತಿದ್ದರು’ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ADVERTISEMENT

ಫಾರೂಕಿ ಅವರ ಚಲನವಲಗಳನ್ನು ಗಮನಿಸಿದ್ದ ಆರೋಪಿಗಳು, ಮುಂಬೈ ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

2024ರ ಡಿಸೆಂಬರ್‌ನಲ್ಲಿ ಹರಿಯಾಣದ ಯಮುನಾನಗರದಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ರಾಹುಲ್‌ ಪ್ರಮುಖ ಆರೋಪಿಯಾಗಿದ್ದಾನೆ ಎಂದೂ ಅವರು ತಿಳಿಸಿದ್ದಾರೆ.

ಹಿಂದಿಯ ಬಿಗ್‌ ಬಾಸ್‌ ಶೋನ ವಿಜೇತರಾಗಿರುವ ಫಾರೂಕಿ ಅವರು ಇನ್‌ಸ್ಟಾಗ್ರಾಂನಲ್ಲಿ 14.2 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.