ADVERTISEMENT

ಮುಂಡ್ಕಾ ಅಗ್ನಿ ದುರಂತ: ಕಟ್ಟಡದ ಮಾಲೀಕ ಬಂಧನ, ಪತ್ತೆಯಾಗದ 19 ಮೃತದೇಹಗಳ ಗುರುತು

ಪಿಟಿಐ
Published 15 ಮೇ 2022, 17:22 IST
Last Updated 15 ಮೇ 2022, 17:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿ ಹೊರವಲಯದ ಮುಂಡ್ಕಾದ ಅಗ್ನಿ ದುರಂತದಲ್ಲಿ 27 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

‘ಘಟನೆಯ ಎರಡು ದಿನಗಳ ಬಳಿಕ ಕಟ್ಟಡದ ಮಾಲೀಕ ಮನೀಶ್ ಲಾಕ್ರಾ ಎಂಬಾತನನ್ನು ಬಂಧಿಸಲಾಗಿದೆ. ಮುಂಡ್ಕಾ ಗ್ರಾಮದ ನಿವಾಸಿಯಾಗಿರುವ ಮನೀಶ್, ಅಗ್ನಿ ದುರಂತದ ಬಳಿಕ ತಲೆಮರೆಸಿಕೊಳ್ಳಲು ಹರಿಯಾಣಕ್ಕೆ ಪರಾರಿಯಾಗಿದ್ದ’ ಎಂದು ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

ಪತ್ತೆಯಾಗದ ಮೃತದೇಹಗಳ ಗುರುತು: ಅಗ್ನಿ ದುರಂತದಲ್ಲಿ ತೀವ್ರವಾಗಿ ಸುಟ್ಟು ಕರಕಲಾಗಿರುವ 19 ಮಂದಿಯ ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿರಿಸಲಾಗಿದ್ದು, ಡಿಎನ್‌ಎ ಪರೀಕ್ಷೆಯ ವರದಿಗಾಗಿ ಮೃತರ ಸಂಬಂಧಿಕರು ಕಾಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.