ADVERTISEMENT

ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಆಗಸ್ಟ್ 2025, 6:17 IST
Last Updated 13 ಆಗಸ್ಟ್ 2025, 6:17 IST
<div class="paragraphs"><p>ಸ್ಪರ್ಧೆಯೊಂದರ ಸಂದರ್ಭದಲ್ಲಿ&nbsp;ಸುಶೀಲ್‌ ಕುಮಾರ್‌ (ಸಂಗ್ರಹ ಚಿತ್ರ)</p></div>

ಸ್ಪರ್ಧೆಯೊಂದರ ಸಂದರ್ಭದಲ್ಲಿ ಸುಶೀಲ್‌ ಕುಮಾರ್‌ (ಸಂಗ್ರಹ ಚಿತ್ರ)

   

ಕೃಪೆ: ಪಿಟಿಐ

ನವದೆಹಲಿ: ಇಲ್ಲಿನ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಬುಧವಾರ ರದ್ದುಗೊಳಿಸಿದೆ.

ADVERTISEMENT

ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ಸುಶೀಲ್‌ಗೆ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್‌ನ ಮಾರ್ಚ್‌ 4ರ ಆದೇಶವನ್ನು ತಳ್ಳಿಹಾಕಿತು. ಒಂದು ವಾರದೊಳಗೆ ಶರಣಾಗುವಂತೆ ಸುಶೀಲ್‌ ಅವರಿಗೆ ಸೂಚಿಸಲಾಗಿದೆ.

ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಾಗರ್ ಅವರ ತಂದೆ ಅಶೋಕ್ ಧನಕರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. 

2021ರ ಮೇ 4ರಂದು ಸಾಗರ್‌ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಸುಶೀಲ್ ಕುಮಾರ್ ಮತ್ತು ಇತರರ ಮೇಲೆ ಇದೆ. ಈ ಘಟನೆ ವೇಳೆ ಸಾಗರ್ ಅವರ ಇಬ್ಬರು ಗೆಳೆಯರೂ ಗಾಯಗೊಂಡಿದ್ದರು. ಆಸ್ತಿ ವಿವಾದಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿತ್ತೆನ್ನಲಾಗಿದೆ.

ಸಾಗರ್ ಅವರ ಮಿದುಳಿಗೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದರೆಂದು ಮಹಜರು ವರದಿಯಲ್ಲಿ ದೃಢಪಟ್ಟಿತ್ತು. ಕುಮಾರ್‌ ಅವರನ್ನು ಕೆಲವು ದಿನಗಳ ನಂತರ ಬಂಧಿಸಲಾಗಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.