ಭದ್ರತಾ ಪಡೆ (ಸಂಗ್ರಹ ಚಿತ್ರ)
(ಪಿಟಿಐ ಚಿತ್ರ)
ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ– ಮಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ನೂರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಫರಕ್ಕಾ ಪ್ರದೇಶದಿಂದ ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಹತ್ಯೆ ನಡೆದಾಗಿನಿಂದ ನೂರುಲ್ ಪರಾರಿಯಾಗಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ- ಮಗ ಸೇರಿದಂತೆ ಮೂವರು ಮೃತಪಟ್ಟಿದ್ದರು.
ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್‌ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್‌ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.