ADVERTISEMENT

ಮುರ್ಶಿದಾಬಾದ್‌ ಗಲಭೆ | ಮನೆಯಲ್ಲಿದ್ದ ಜನರನ್ನು ಹೊರಗೆಳೆದು ಕೊಂದಿದ್ದಾರೆ; NCW

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಏಪ್ರಿಲ್ 2025, 10:30 IST
Last Updated 19 ಏಪ್ರಿಲ್ 2025, 10:30 IST
<div class="paragraphs"><p>ಮುರ್ಶಿದಾಬಾದ್‌ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ&nbsp;ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ನೇತೃತ್ವದ ನಿಯೋಗವು ಭೇಟಿ ನೀಡಿತು.</p></div>

ಮುರ್ಶಿದಾಬಾದ್‌ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ನೇತೃತ್ವದ ನಿಯೋಗವು ಭೇಟಿ ನೀಡಿತು.

   

ಕೋಲ್ಕತ್ತ: ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ನೇತೃತ್ವದ ನಿಯೋಗವು ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದೆ.

ಈ ವೇಳೆ ನಿಯೋಗವು ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಭವಿಷ್ಯದಲ್ಲಿ ಅವರ ಸುರಕ್ಷತೆಗಾಗಿ ಕೇಂದ್ರದಿಂದ ಅಗತ್ಯ ಕ್ರಮಗಳು ಜಾರಿಯಾಗಲಿದೆ ಎಂದು ನಿಯೋಗ ತಿಳಿಸಿದೆ.

ADVERTISEMENT

'ಕೆಲವು ಮಹಿಳೆಯರು ತಮ್ಮ ಗಂಡನನ್ನು ಕಳೆದುಕೊಂಡಿದ್ದಾರೆ, ಮತ್ತೆ ಕೆಲವರು ಮಗನನ್ನು ಕಳೆದುಕೊಂಡಿದ್ದಾರೆ. ಹಿಂಸಾಚಾರದ ವೇಳೆ ಜನರನ್ನು ಮನೆಗಳಿಂದ ಹೊರಗೆಳೆದು ಕೊಂದಿದ್ದಾರೆ. ಇದು ನಿಜಕ್ಕೂ ಭಯಾನಕವಾಗಿದೆ. ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳು ಈ ಹಿಂದೆ ನಡೆದಿವೆಯೇ? ನನಗೆ ಗೊತ್ತಿಲ್ಲ. ಇಂತಹದ್ದನ್ನೆಲ್ಲಾ ಮೊದಲ ಬಾರಿಗೆ ನೋಡಿದ್ದೇವೆ. ಇದು ಸ್ವೀಕಾರಾರ್ಹವಲ್ಲ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು' ಎಂದು ಎನ್‌ಸಿಡಬ್ಲ್ಯೂ ಸದಸ್ಯೆ ಅರ್ಚನಾ ಮಜುಂದಾರ್‌ ಸುದ್ದಿಸಂಸ್ಥೆ 'ಎಎನ್‌ಐ'ಗೆ ತಿಳಿಸಿದ್ದಾರೆ.

ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ ರಹತ್ಕರ್, 'ಚಿಂತಿಸಬೇಡಿ, ನಿಮ್ಮೊಂದಿಗೆ ಆಯೋಗ, ಕೇಂದ್ರ ಸರ್ಕಾರ ಇದೆ. ನಿಮ್ಮ ಕಷ್ಟಗಳನ್ನು ಆಲಿಸಲು ಇಲ್ಲಿಗೆ ಬಂದಿದ್ದೇವೆ. ನೀವು ಒಬ್ಬಂಟಿಯಲ್ಲ. ದೇಶವೇ ನಿಮ್ಮ ಜತೆ ಇದೆ' ಎಂದು ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್‌ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್‌ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ನೂರಾರು ಮಹಿಳೆಯರು ರಕ್ಷಣೆಗಾಗಿ ತಮ್ಮ ಮನೆಗಳನ್ನು ತೊರೆದು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.