ADVERTISEMENT

ಮಸೀದಿಗೆ ಮುಸ್ಲಿಂ ಮಹಿಳೆಯರ ಪ್ರವೇಶ ಕೇಂದ್ರದ ಅಭಿಪ್ರಾಯ ಕೇಳಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 4:28 IST
Last Updated 26 ಅಕ್ಟೋಬರ್ 2019, 4:28 IST
   

ನವದೆಹಲಿ: ದೇಶದಲ್ಲಿರುವ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡುವ ಕುರಿತು ನ.5ರ ಒಳಗಾಗಿ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ.

ಯಾಸ್ಮೀನ್‌ ಜುಬೇರ್‌ ಅಹ್ಮದ್‌ ಪೀರ್‌ಜಾದೆ ಎಂಬುವವರು ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್‌.ಎ.ಬೊಬಡೆ ಹಾಗೂ ಎಸ್‌.ಎ.ನಜೀರ್‌ ಅವರಿರುವ ನ್ಯಾಯಪೀಠ, ಕೇಂದ್ರದ ಕಾನೂನು ಹಾಗೂ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯಗಳಿಗೆ ನೋಟಿಸ್‌ ಜಾರಿ ಮಾಡಿದೆ.

ADVERTISEMENT

‘ಮಸೀದಿಗಳಿಗೆ ಮುಸ್ಲಿಂ ಮಹಿಳೆಯರಿಗೂ ಪ್ರವೇಶ ನೀಡುವಂತೆ ಎಲ್ಲ ಸರ್ಕಾರ ಹಾಗೂ ವಕ್ಫ್‌ ಮಂಡಳಿ ಸೇರಿದಂತೆ ಮುಸ್ಲಿಂ ಸಮುದಾಯದ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು. ಮಸೀದಿಗೆ ಪ್ರವೇಶ ನಿರಾಕರಿಸುವುದು ಹಲವಾರು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಲಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.