ADVERTISEMENT

ಮುಜಾಫರ್‌ನಗರ ಗಲಭೆ: ಬಿಜೆಪಿ ಶಾಸಕನಿಗೆ ಎರಡು ವರ್ಷ ಜೈಲು ಶಿಕ್ಷೆ

ಪಿಟಿಐ
Published 11 ಅಕ್ಟೋಬರ್ 2022, 19:28 IST
Last Updated 11 ಅಕ್ಟೋಬರ್ 2022, 19:28 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಮುಜಾಫರ್‌ನಗರ, ಉತ್ತರ ಪ್ರದೇಶ (ಪಿಟಿಐ): ಇಲ್ಲಿ 2013ರಲ್ಲಿ ನಡೆದಿದ್ದ ಗಲಭೆ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕ ವಿಕ್ರಂ ಸೈನಿ ಮತ್ತು ಇತರ 11 ಮಂದಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ವಿಶೇಷ ನ್ಯಾಯಾಧೀಶ ಗೋಪಾಲ್‌ ಉಪಾಧ್ಯಾಯ ಅವರು ಆರೋಪಿಗಳಿಗೆ ತಲಾ ₹10 ಸಾವಿರ ದಂಡವನ್ನೂ ವಿಧಿಸಿದ್ದಾರೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ 15 ಮಂದಿಯನ್ನು ನ್ಯಾಯಪೀಠವು ಆರೋಪಮುಕ್ತಗೊಳಿಸಿದೆ.

ಉತ್ತರಪ್ರದೇಶದ ಖತೌಲಿ ಕ್ಷೇತ್ರದ ಶಾಸಕರಾಗಿರುವ ವಿಕ್ರಂ ಹಾಗೂ ಇತರರನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.