ADVERTISEMENT

ಜಾರ್ಖಂಡ್: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 7 ಸಾವು, 24ಕ್ಕೂ ಹೆಚ್ಚು ಮಂದಿಗೆ ಗಾಯ

ಪಿಟಿಐ
Published 5 ಜನವರಿ 2022, 9:54 IST
Last Updated 5 ಜನವರಿ 2022, 9:54 IST
ಜಾರ್ಖಂರ್ಡ್‌ನಲ್ಲಿ ನಡೆದ ಭೀಕರ ಅಪಘಾತ
ಜಾರ್ಖಂರ್ಡ್‌ನಲ್ಲಿ ನಡೆದ ಭೀಕರ ಅಪಘಾತ   

ಪಾಕುಡ್: ಜಾರ್ಖಂಡ್‌ನ ಪಾಕುಡ್ ಜಿಲ್ಲೆಯಲ್ಲಿ ಬುಧವಾರ ಬಸ್ ಹಾಗೂ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಏಳು ಜನರು ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮರಾಪಾಡ ಠಾಣೆಯ ಪಡೆರ್ ಕೋಲಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.

ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅಜಿತ್ ಕುಮಾರ್ ತಿಳಿಸಿದ್ದಾರೆ.

ಹಲವು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿದ್ದರು. ಬಳಿಕ ಗ್ಯಾಸ್ ಕಟರ್ ಬಳಸಿ ಬಸ್ಸೀಳುವ ಮೂಲಕ ಗಾಯಾಳುಗಳನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮಿತ ವೇಗವೇ ಅಪಘಾತಕ್ಕೆ ಕಾರಣ ಎಂದು ಅಂದಾಜಿಸಲಾಗಿದೆ. ಬಸ್ ಹಾಗೂ ಟ್ರಕ್ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜುಗೊಂಡಿದೆ.

ಅದೃಷ್ಟವಶಾತ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿಲ್ಲ. ಆದರೂ ಸಾವಿನ ಸಂಖ್ಯೆ ಹೆಚ್ಚುವಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.