ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ನಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಭಾರತ ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ಎಲ್ಲಾ ರೀತಿಯ ನೆರವಿಗೆ ಭಾರತ ಸಿದ್ದವಿದೆ. ವಿದೇಶಾಂಗ ಸಚಿವಾಲಯವು ಎರಡೂ ದೇಶಗಳ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿ ಇರಲಿದೆ’ ಎಂದು ಬರೆದುಕೊಂಡಿದ್ದಾರೆ.
7.7ರಷ್ಟು ತೀವ್ರತೆಯ ಭೂಕಂಪ ಮ್ಯಾನ್ಮಾರ್‌ನ ಮಧ್ಯ ಭಾಗದಲ್ಲಿ ಶುಕ್ರವಾರ ಸಂಭವಿಸಿದ್ದು, ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಮೇಲೂ ಪರಿಣಾಮ ಬೀರಿದೆ.
ಬ್ಯಾಂಕಾಕ್ ನಲ್ಲಿ ಮುಗಿಲೆತ್ತರದ ಕಟ್ಟಡಗಳು ನಡುಗುವ, ನಿರ್ಮಾಣ ಹಂತದ ಕಟ್ಟಡ ನೆಲಕ್ಕುರುಳುವ ಭಯಾನಕ ದೃಶ್ಯಗಳ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.