ರಜೌರಿ ಜಿಲ್ಲೆಯಲ್ಲಿ ನಿಗೂಢ ಕಾಯಿಲೆ ಕಾಣಿಸಿಕೊಂಡ ನಂತರ ಕಂಟೈನ್‌ಮೆಂಟ್ ವಲಯದಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ
ಪಿಟಿಐ ಚಿತ್ರ
ರಜೌರಿ/ ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಾಔರಿಯ ಬಧಾಲ್ ಗ್ರಾಮದಲ್ಲಿ 17 ಜನರು ಮೃತಪಟ್ಟಿರುವುದಕ್ಕೆ ಕಾರಣ ಏನು ಎಂಬುವುದರ ನಿಗೂಢತೆ ಮುಂದುವರಿದಿದ್ದು, ಇನ್ನು ಸುಳಿವು ಸಿಕ್ಕಿಲ್ಲ. ತನಿಖೆಯ ಭಾಗವಾಗಿ, ಅಧಿಕಾರಿಗಳು ಜಿಲ್ಲೆಯಲ್ಲಿರುವ ಕೀಟನಾಶಕ ಮಳಿಗೆಗಳ ಮೇಲೆ ದಾಳಿ ನಡೆಸಿದ್ದು, ಮಳಿಗೆಗಳನ್ನು ಮುಂದಿನ ಆದೇಶದವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.
ನಿಗೂಢ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ 11 ಜನ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸುಮಾರು 250 ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರದ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಈ ಶೋಧ ಕಾರ್ಯ ಇನ್ನು ಎರಡು ದಿನ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಹದಾಲ್ ಗ್ರಾಮವನ್ನು ಇನ್ನು ಕಂಟೈನ್‌ಮೆಂಟ್ ಜೋನ್‌ನಲ್ಲೇ ಇರಿಸಲಾಗಿದ್ದು, ಮುಂಜಾಗ್ರತಾ ಕ್ರಮಾವಾಗಿ 79 ಕುಟುಂಬಗಳನ್ನು ಐಸೋಲೇಟ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.