ADVERTISEMENT

ವಿಶೇಷ ಸ್ಥಾನಮಾನಕ್ಕೆ ಆಗ್ರಹ: ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 6:11 IST
Last Updated 11 ಫೆಬ್ರುವರಿ 2019, 6:11 IST
ಚಿತ್ರ: ಎಎನ್‌ಐ ಟ್ವಿಟರ್‌
ಚಿತ್ರ: ಎಎನ್‌ಐ ಟ್ವಿಟರ್‌   

ನವದೆಹಲಿ: ಆಂಧ್ರ ಪ್ರದೇಶಕ್ಕೆವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೆಹಲಿಯ ಆಂಧ್ರ ಪ್ರದೇಶ ಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸೋಮವಾರ ಉಪವಾಸಸತ್ಯಾಗ್ರಹ ಆರಂಭಕ್ಕೂಮುನ್ನ ತೆಲುಗುದೇಶಂ ಪಕ್ಷ (ಟಿಡಿಪಿ) ಸಂಸದರುರಾಜ್‌ಘಾಟ್‌ನ ಮಹಾತ್ಮ ಗಾಂಧಿಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಎರಡು ವಿಶೇಷ ರೈಲುಗಳಲ್ಲಿ ಪ್ರತಿಭಟನಾಕಾರರು ಆಂಧ್ರಪ್ರದೇಶದಿಂದ ದೆಹಲಿಗೆಬಂದಿಳಿದಿದ್ದಾರೆ. ಜತೆಗೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ADVERTISEMENT

ಪ್ರಧಾನಿ ಮೋದಿ ಅವರ ಭೇಟಿ ವಿರೋಧಿಸಿ ಭಾನುವಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರತಿಭಟನೆ, ಧರಣಿ ಭುಗಿಲೆದ್ದಿವೆ.

ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಕಾಂಗ್ರೆಸ್‌ ಮತ್ತು ಎಡ ಪಕ್ಷಗಳು ಸೇರಿದಂತೆ ವಿರೋಧ ಪಕ್ಷಗಳು ಕರಾಳ ದಿನಾಚರಣೆಗೆ ಕರೆ ನೀಡಿದ್ದವು.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದಿಯಾಗಿ ಟಿಡಿಪಿ ನಾಯಕರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ‘ಮೋದಿ ಗೋ ಬ್ಯಾಕ್‌’ ಅಭಿಯಾನ ತೀವ್ರಗೊಂಡಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಕಾರ್ಯಕರ್ತರು ಮತ್ತು ತಮಿಳುನಾಡಿನಲ್ಲಿ ವೈಕೊ ನೇತೃತ್ವದಲ್ಲಿ ಅವರ ಎಂಡಿಎಂಕೆ ಪಕ್ಷದ ಕಾರ್ಯಕರ್ತರು ಕಪ್ಪು ಬಲೂನ್‌ ಹಾರಿ ಬಿಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ತಮ್ಮ ರಾಜ್ಯಗಳಿಗೆ ಅನ್ಯಾಯ ಮಾಡಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿರುವ ‘ಮೋದಿ ಗೋ ಬ್ಯಾಕ್‌’ ಅಭಿಯಾನಕ್ಕೆ ಭಾರಿ ಬೆಂಬಲ ಮತ್ತು ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿಯು ‘ಮೋದಿಗೆ ಸ್ವಾಗತ’ ಅಭಿಯಾನ ಅರಂಭಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.