ADVERTISEMENT

ಎನ್‌.ಡಿ. ತಿವಾರಿ ಸ್ಥಿತಿ ಗಂಭೀರ

ಪಿಟಿಐ
Published 8 ಜುಲೈ 2018, 16:41 IST
Last Updated 8 ಜುಲೈ 2018, 16:41 IST

ನವದೆಹಲಿ: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಎನ್‌.ಡಿ. ತಿವಾರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರ ರೋಹಿತ್‌ ಶೇಖರ್‌ ತಿವಾರಿ ತಿಳಿಸಿದ್ದಾರೆ.

ತಿವಾರಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಿದುಳು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಶನಿವಾರ ತೀವ್ರನಿಗಾ ಘಟಕಕ್ಕೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.